- Advertisement -
- Advertisement -





ಮಂಗಳೂರು: ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಜಿಗಿದು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಅತ್ತಾವರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು ಉತ್ತರ ಭಾರತ ಮೂಲದ ಸಾರ್ಥಕ್ ಮೌರ್ಯ(23) ಎಂದು ಗುರುತಿಸಲಾಗಿದೆ. ಗೆಳತಿಯೊಬ್ಬಳು ವಾಸವಾಗಿದ್ದ ಅಪಾರ್ಟ್‌ಮೆಂಟ್‌ಗೆ ಬಂದಿದ್ದ ಯುವಕ, 12ನೇ ಮಹಡಿ ತೆರಳಿ ಅಲ್ಲಿಂದ ಜಿಗಿದಿದ್ದಾನೆ ಎನ್ನಲಾಗಿದೆ. ಈತ ಅತ್ತಾವರದ ಪಿಜಿಯೊಂದರಲ್ಲಿ ವಾಸವಾಗಿದ್ದ.
ನಾಳೆಯಿಂದ(ಮಾ.31) ಮೆಡಿಕಲ್ ಪರೀಕ್ಷೆ ಇತ್ತು. ಈಗ ಆತ್ಮಹತ್ಯೆಗೆ ಪರೀಕ್ಷೆ ಭಯವೋ? ಪ್ರೇಮ ವೈಫಲ್ಯವೋ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತಪಾಸಣೆ ನಡೆಸಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








