Wednesday, July 22, 2026
spot_imgspot_img
spot_imgspot_img

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಮಹಿಳೆಗೆ ಗಂಭೀರ ಗಾಯ

- Advertisement -
- Advertisement -

ಬಂಟ್ವಾಳ: ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ(48) ಎಂದು ಗುರುತಿಸಲಾಗಿದೆ.

ಅವರು ತನ್ನ ಮಗಳೊಂದಿಗೆ ಮಾ.30 ರಂದು ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ಗುಳಿಗಜ್ಜ ಕಟ್ಟೆಗೆ ಹಣ ಹಾಕುವ ಸಲುವಾಗಿ ಬೆಳಿಗ್ಗೆ ಬಂದಿದ್ದರು. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿ ರಸ್ತೆಯನ್ನು ದಾಟಿ ಹೆದ್ದಾರಿ ರಸ್ತೆಯ ಅಂಚಿಗೆ ತಲುಪಿದಾಗ ಮೆಲ್ಕಾರ್ ಕಡೆಯಿಂದ ಮುಡಿಪು ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಗಾಯಗೊಂಡ ಮಹಿಳೆಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!