- Advertisement -
- Advertisement -
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.
- Advertisement -