Wednesday, October 21, 2026
spot_imgspot_img
spot_imgspot_img

ನೆಲ್ಯಾಡಿ ಗ್ರಾ.ಪಂ.ಅಭ್ಯರ್ಥಿ ಅಬ್ದುಲ್ ಹಮೀದ್ ಹೃದಯಾಘಾತದಿಂದ ನಿಧನ

- Advertisement -
- Advertisement -

ನೆಲ್ಯಾಡಿ: ಈ ತಿಂಗಳ 27ರಂದು ನಡೆಯಲಿದ್ದ ಗ್ರಾ.ಪಂ.ಚುನಾವಣೆಗೆ ಸಂಬಂಧಿಸಿದಂತೆ ನೆಲ್ಯಾಡಿ ಗ್ರಾ.ಪಂ.ನ 2ನೇ ವಾರ್ಡ್‌ನ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ನೆಲ್ಯಾಡಿ ಗ್ರಾಮದ ಮೊರಂಕಳ ನಿವಾಸಿ ಅಬ್ದುಲ್ ಹಮೀದ್ ಪೈಂಟರ್(60ವ.)ರವರು ನಿನ್ನೆ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಿನ್ನೆ ಹಗಲು ವೇಳೆ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅಬ್ದುಲ್ ಹಮೀದ್‌ರವರಿಗೆ ತಡರಾತ್ರಿ ವೇಳೆ ಎದೆನೋವು ಕಾಣಿಸಿಕೊಂಡಿದ್ದು ಮನೆಯವರು ತಕ್ಷಣ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ದಾರಿಮಧ್ಯೆ ಅವರು ಮೃತಪಟ್ಟಿರು ಎಂದು ವರದಿಯಾಗಿದೆ.

ಅಬ್ದುಲ್ ಹಮೀದ್‌ರವರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಕಳೆದ ಅವಧಿಯಲ್ಲಿ ನೆಲ್ಯಾಡಿ ಗ್ರಾ.ಪಂ.ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿದ್ದರು. ಆದರೆ ಈ ಬಾರಿ ಅವರು ಬಿಜೆಪಿಗೆ ಸೇರ್ಪಡೆಗೊಂಡು ಬಿಜೆಪಿ ಅಭ್ಯರ್ಥಿಯಾಗಿ ನೆಲ್ಯಾಡಿ ಗ್ರಾ.ಪಂ.ನ 2ನೇ ವಾರ್ಡ್‌ನ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಇವರು ಉತ್ತಮ ಆರ್ಟಿಸ್ಟ್ ಆಗಿದ್ದು ಗೋಡೆ ಬರಹ, ನಾಮಫಲಕ ಬರೆಯುವ ಕೆಲಸ ಮಾಡುತ್ತಿದ್ದರು. ಮೃತರ ಮನೆಗೆ ಹಲವು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!