Tuesday, July 21, 2026
spot_imgspot_img
spot_imgspot_img

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳ ಅನಧಿಕೃತ ನಿರ್ಮಾಣಗಳಿಗೆ ಕಟ್ಟುನಿಟ್ಟಿನ ಕ್ರಮ

- Advertisement -
- Advertisement -

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿರುವವರು ತಮ್ಮ ತಳ್ಳುಗಾಡಿ ಸುತ್ತ ಮುತ್ತ ಅನಧಿಕೃತ ನಿರ್ಮಾಣ ಮಾಡಿರುವುದು, ಗ್ರಾಹಕರು ಕುಳಿತುಕೊಳ್ಳುವ ವ್ಯವಸ್ಥೆಗಳನ್ನು ಮಾಡಿರುವುದು, ಕಂಬ ಹಾಕಿ ಟಾರ್ಪಲ್/ಶೀಟು ಅಳವಡಿಸಿರುವುದು ಕಂಡುಬಂದಿರುತ್ತದೆ.

ಕೆಲವರು ಚರಂಡಿಗಳನ್ನು ಒತ್ತುವರಿ ಮಾಡಿ ನಿರ್ಮಾಣಗಳನ್ನು ಮಾಡಿರುವ ಬಗ್ಗೆ ದೂರುಗಳು ಬರುತ್ತಿದೆ. ಆದ್ದರಿಂದ ಇಂತಹ ಅನಧಿಕೃತ ನಿರ್ಮಾಣಗಳನ್ನು ಮಾಡಿದವರು ತಾವಾಗಿ ತೆರವುಗೊಳಿಸಲು ಸೂಚಿಸಿದೆ. ತಪ್ಪಿದಲ್ಲಿ ಯಾವುದೇ ಮುನ್ಸೂಚನೆ ನೀಡದೆ ಪಟ್ಟಣ ಪಂಚಾಯಿತಿಯ ವತಿಯಿಂದ ತೆರವುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

- Advertisement -

Related news

error: Content is protected !!