Monday, August 3, 2026
spot_imgspot_img
spot_imgspot_img

ಬಾವಿಗೆ ಉರುಳಿದ ಕಾರು, ಒಂದೇ ಕುಟುಂಬದ 9 ಮಂದಿ ಸಾವು

- Advertisement -
- Advertisement -

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನ ಘೋರ ದುರಂತವೊಂದು ಸಂಭವಿಸಿದೆ. ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ದುರ್ಮಣಕ್ಕೀಡಾಗಿದ್ದಾರೆ. ಅಪಘಾತಕ್ಕೆ ಇನ್ನೂ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಶುಕ್ರವಾರ ತಡರಾತ್ರಿ ಕಾರ್ಯಕ್ರಮ ಮುಗಿಸಿ ಬರುವಾಗ ಕಾರು ಬಾವಿಗೆ ಬಿದ್ದು ಘಟನೆ ಸಂಭವಿಸಿದೆ.

ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನ ಶಿವಾಜಿನಗರ ಪ್ರದೇಶದ ರಾಜ್ ಬ್ಯಾಂಕ್ವೆಟ್ ಹಾಲ್​ನಲ್ಲಿ ಶುಕ್ರವಾರ ಸಂಜೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಕೂಡ ಭಾಗಿಯಾಗಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಕಾರ್ಯಕ್ರಮ ಮುಗಿದ ನಂತರ, ದಿಂಡೋರಿಯ ದರ್ಗೋಡ್ ಕುಟುಂಬವು ಮಾರುತಿ XL6 ಕಾರಿನಲ್ಲಿ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಭೀಕರ ದುರಂತದಲ್ಲಿ ಒಂದೇ ಕುಟುಂಬದ 9 ಜನ ಸಾವನ್ನಪ್ಪಿದ್ದಾರೆ. ಮೃತರನ್ನು ರೇಷ್ಮಾ ಸುನಿಲ್ ದರ್ಗುಡೆ (27), ಆಶಾ ಅನಿಲ್ ದರ್ಗುಡೆ (32), ಖುಷಿ/ಶ್ರಿಷ್ಟಿ ಅನಿಲ್ ದರ್ಗುಡೆ (14), ಶ್ರೇಯಸ್ ಅನಿಲ್ ದರ್ಗುಡೆ (11), ರಾಖಿ/ಗುಣವಂತಿ ಸುನಿಲ್ ದರ್ಗುಡೆ, ಶ್ರಾವಣಿ ಅನಿಲ್ ದರ್ಗುಡೆ (11), ಸಮೃದ್ಧಿ ರಾಜೇಂದ್ರ ದರ್ಗುಡೆ (7), ಮಾಧುರಿ ಅನಿಲ್ ದರ್ಗುಡೆ (13) ಮತ್ತು ಸುನಿಲ್ ದತ್ತು ದರ್ಗುಡೆ (32) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನ ಇಂದೋರ್ ನಿವಾಸಿಗಳು. ಪ್ರಾಥಮಿಕ ವರದಿಗಳ ಪ್ರಕಾರ, ಕಾರು ನಿಯಂತ್ರಣ ಕಳೆದುಕೊಂಡಿದ್ದರಿಂದ ಅಪಘಾತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ತಡರಾತ್ರಿಯವರೆಗೂ ಮುಂದುವರಿದಿದ್ದು, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ತಂಡವೂ ಸ್ಥಳಕ್ಕೆ ಆಗಮಿಸಿದೆ. ಆದಾಗ್ಯೂ, ಸ್ಥಳದಲ್ಲಿ ಜನಸಂದಣಿ ಹೆಚ್ಚಾಗಿದ್ದರಿಂದ ರಕ್ಷಣಾ ಕಾರ್ಯಗಳಿಗೆ ಅಡ್ಡಿಯಾಗಿದೆ. ದಿಂಡೋರಿ ಪೊಲೀಸರು ಪ್ರಕರಣದ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!