Tuesday, July 21, 2026
spot_imgspot_img
spot_imgspot_img

ಚಿತ್ರದುರ್ಗ: ಲಾರಿ-ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಚಿತ್ರದುರ್ಗ: ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ.

ಬೆಂಗಳೂರು ಮೂಲದ ರವಿಚಂದ್ರ(40), ಸಂತೋಷ್(25) ಮೃತಪಟ್ಟವರು.

ಬೆಂಗಳೂರು ಕಡೆಯಿಂದ ಬಳ್ಳಾರಿ ಕಡೆ ತೆರಳುತ್ತಿದ್ದ ಕಾರು ಮತ್ತು ಬಳ್ಳಾರಿ ಕಡೆಯಿಂದ ಚಳ್ಳಕೆರೆ ಕಡೆ ಬರುತ್ತಿದ್ದ ಲಾರಿ ಮಧ್ಯೆ ಈ ಅವಘಡ ಸಂಭವಿಸಿದ್ದು, ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ರಾಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!