Wednesday, July 22, 2026
spot_imgspot_img
spot_imgspot_img

ಬಂಟ್ವಾಳದಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ಭೇದಿಸಿದ ಪೊಲೀಸರು -ಇಬ್ಬರು ಆರೋಪಿಗಳ ಬಂಧನ, ವಾಹನ ವಶಕ್ಕೆ

- Advertisement -
- Advertisement -

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದ್ವಿಚಕ್ರ ವಾಹನ ಕಳವು ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಾರ್ಚ್ 21, 2026ರಂದು ಪರ್ಲಿಯಾ ಪ್ರದೇಶದ ವಸತಿಗೃಹದ ಶೆಡ್‌ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿದ್ದ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ (ಅ.ಕ್ರ: 37/2026, ಕಲಂ 303(2) BNS 2023) ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಕೈಗೊಂಡಿದ್ದರು.ತನಿಖೆಯ ವೇಳೆ ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಹಸನ್ ಬಾವ (55) ಹಾಗೂ ಬಂಟ್ವಾಳ ಬಿ ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ (37) ಅವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಕಳವಾಗಿದ್ದ ಅಂದಾಜು ರೂ.50,000 ಮೌಲ್ಯದ ಸ್ಕೂಟರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಕುರಿತು ಬಂಟ್ವಾಳ ನಗರ ಠಾಣಾ ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.

- Advertisement -

Related news

error: Content is protected !!