Sunday, July 19, 2026
spot_imgspot_img
spot_imgspot_img

ಏಪ್ರಿಲ್ 9ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

- Advertisement -
- Advertisement -

ಬೆಂಗಳೂರು: ಫೆಬ್ರವರಿ – ಮಾರ್ಚ್ ತಿಂಗಳಲ್ಲಿ ನಡೆದಿದ್ದ ದ್ವೀತಿಯ ಪಿಯುಸಿ ಪರೀಕ್ಷೆ-1 ಫಲಿತಾಂಶಕ್ಕೆ ಪರೀಕ್ಷಾ ಮಂಡಳಿ ಅಂತಿಮ ದಿನಾಂಕ ಪ್ರಕಟಿಸಿದೆ. ಏಪ್ರಿಲ್‌ 9 ರಂದು (ಗುರುವಾರ) ಬೆಳಗ್ಗೆ ಫಲಿತಾಂಶ ಪ್ರಕಟವಾಗಲಿದೆ.

ಮಂಡಳಿಯು ಮೊದಲು ಸುದ್ದಿಗೋಷ್ಠಿಯ ಮೂಲಕ ಫಲಿತಾಂಶದ ವಿವರಗಳನ್ನು ಹಂಚಿಕೊಂಡು, ನಂತರ ಅಧಿಕೃತ ವೆಬ್‌ಸೈಟ್‌ಗಳಾದ kseab.karnataka.gov.in ಅಥವಾ karresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಿದೆ.

ಆನ್‌ಲೈನ್‌ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ನೋಡುವ ವಿಧಾನ:

  • ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
  • ‘Submit’ ಬಟನ್ ಒತ್ತಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ ನಂತರ ಪ್ರಿಂಟ್‌ಔಟ್ ತೆಗೆದುಕೊಳ್ಳಬಹುದು.

ಫಲಿತಾಂಶದ ನಂತರ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಏಪ್ರಿಲ್ 25 ರಿಂದ ಮೇ ಮೊದಲ ವಾರದವರೆಗೆ ಪೂರಕ ಪರೀಕ್ಷೆಗಳನ್ನು ನಡೆಸಲು ಮಂಡಳಿ ಚಿಂತನೆ ನಡೆಸಿದ ಎನ್ನಲಾಗಿದೆ.

- Advertisement -

Related news

error: Content is protected !!