Wednesday, July 22, 2026
spot_imgspot_img
spot_imgspot_img

ಕದನ ವಿರಾಮ ಘೋಷಣೆಯ ಬೆನ್ನಲ್ಲೇ ಕಚ್ಚಾ ತೈಲ ದರ ಭಾರೀ ಕುಸಿತ!

- Advertisement -
- Advertisement -

ಲಂಡನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಜೊತೆಗೆ 14 ದಿನಗಳ ಕದನ ವಿರಾಮವನ್ನು ಘೋಷಿಸಿದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರೀ ಕುಸಿತವಾಗಿದೆ.

ಕದನ ವಿರಾಮದ ಸುದ್ದಿಯಿಂದಾಗಿ ಕಚ್ಚಾ ತೈಲದ ಬೆಲೆಗಳು ಒಂದೇ ದಿನದಲ್ಲಿ ಸುಮಾರು 13% ರಿಂದ 17% ರಷ್ಟು ಕುಸಿದಿದ್ದು, ಇದು ಕಳೆದ ಆರು ವರ್ಷಗಳಲ್ಲೇ ಒಂದೇ ದಿನ ಕಂಡ ಅತಿ ದೊಡ್ಡ ಕುಸಿತ ಇದಾಗಿದೆ.

ಅಮೆರಿಕದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಕಚ್ಚಾ ತೈಲದ ಬೆಲೆ ಸುಮಾರು 16.13 ಡಾಲರ್ (14.3%) ಇಳಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 96.82 ಡಾಲರ್‌(8,940 ರೂ.) ತಲುಪಿದೆ. ಜಾಗತಿಕ ಮಾನದಂಡವಾದ ಒಪೆಕ್‌ ದೇಶಗಳ ಬ್ರೆಂಟ್ ಕಚ್ಚಾ ತೈಲದ ದರ 14.84 ಡಾಲರ್ (13.6%) ನಷ್ಟು ಕುಸಿದು ಪ್ರತಿ ಬ್ಯಾರೆಲ್‌ಗೆ 94.43 ಡಾಲರ್‌ಗೆ(8,720 ರೂ.) ಇಳಿಕೆಯಾಗಿದೆ.

ಈ ಘೋಷಣೆಗೂ ಮುನ್ನ ಯುದ್ಧದ ಭೀತಿಯಿಂದಾಗಿ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 117–120 ಡಾಲರ್‌(11 ಸಾವಿರ ರೂ.ವರೆಗೆ) ವರೆಗೂ ಏರಿಕೆಯಾಗಿತ್ತು.

ಇರಾನ್ ಹಾರ್ಮುಜ್ ಜಲಸಂಧಿಯನ್ನು ತಕ್ಷಣವೇ ಮುಕ್ತಗೊಳಿಸಲು ಇರಾನ್‌ ಒಪ್ಪಿಗೆ ನೀಡಿದ್ದರಿಂದ ಮಾರುಕಟ್ಟೆಯಲ್ಲಿನ ಆತಂಕವನ್ನು ಕಡಿಮೆ ಮಾಡಿದ್ದು, ಜಗತ್ತಿನ ಸುಮಾರು 20% ತೈಲ ಪೂರೈಕೆ ಈ ಮಾರ್ಗದ ಮೂಲಕವೇ ನಡೆಯುವುದರಿಂದ ಪೂರೈಕೆ ಸಹಜ ಸ್ಥಿತಿಗೆ ಮರಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬೆಲೆ ಇಳಿದಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!