- Advertisement -
- Advertisement -





ಮಡಿಕೇರಿ: ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ.
ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು ಕಾಯಿಮಾನಿ ನಿವಾಸಿ ರತ್ತು ಎಂದು ಗುರುತಿಸಲಾಗಿದೆ.
ಇಂದು (ಏ.8) ಬೆಳ್ಳಂಬೆಳಗ್ಗೆ ರತ್ತು ಅವರು ಕುರ್ಚಿ-ಕಾಯಿಮಾನಿ ನಡುವೆ ಇರುವ ತಮ್ಮ ಕಾಫಿ ತೋಟಕ್ಕೆ ಎಂದಿನಂತೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಏಕಾಏಕಿ ಎದುರಾದ ಕಾಡಾನೆ ಅವರ ಮೇಲೆ ದಾಳಿ ನಡೆಸಿ, ತುಳಿದು ಸಾಯಿಸಿದೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಟ್ಟ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








