Monday, July 27, 2026
spot_imgspot_img
spot_imgspot_img

ವಿಜಯಪುರ: ಪ್ರವಾಸಕ್ಕೆ ಹೋಗಿದ್ದ ಬೆಂಗಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು!

- Advertisement -
- Advertisement -

ವಿಜಯಪುರ: ಪ್ರವಾಸಕ್ಕೆ ಬಂದಿದ್ದ ಮೂವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ ನಡೆದಿದೆ.

ಮೃತರನ್ನು ಬೆಂಗಳೂರಿನ ಆರ್.ಟಿ ನಗರದ ಬಾಲಕ ಮಹಮ್ಮದ್ ಹಯಾತ್, ಅಬ್ದುಲ್ ಖುದ್ದುಸ್ ಹಾಗೂ ಹೈದರ್ ಪಾಶಾ ಸಾವನ್ನಪ್ಪಿದ್ದಾರೆ.

14 ಜನ ಕುಟುಂಬಸ್ಥರು ಪ್ರವಾಸಕ್ಕೆಂದು ವಿಜಯಪುರಕ್ಕೆ ಬಂದಿದ್ದರು. ಈ ವೇಳೆ ಭೂತನಾಳ ಕೆರೆ ವೀಕ್ಷಣೆಗೆ ಹೋಗಿದ್ದರು. ಮೃತ ಬಾಲಕ ನೀರಿಗೆ ಇಳಿದು ಆಟವಾಡುವಾಗ ಮುಳುಗಿದ್ದಾನೆ. ಬಾಲಕನ ರಕ್ಷಣೆಗೆ ಇನ್ನಿಬ್ಬರು ನೀರಿಗೆ ಇಳಿದಿದ್ದಾರೆ. ಆದರೆ ರಕ್ಷಿಸಲಾಗದೇ ಇಬ್ಬರು ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ತೀವ್ರ ಅಸ್ವಸ್ಥರಾಗಿದ್ದರು.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಆದರ್ಶ ನಗರ ಪೊಲೀಸರು ಎರಡು ಶವಗಳನ್ನು ಹೊರತೆಗೆದಿದ್ದು, ಇನ್ನೋರ್ವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಸದ್ಯ ಶವಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಪೊಲೀಸರು ಶವಗಳನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!