Wednesday, July 22, 2026
spot_imgspot_img
spot_imgspot_img

ಕನ್ಯಾನ ಸರ್ಕಾರಿ ಪದವಿ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

- Advertisement -
- Advertisement -

ಕನ್ಯಾನ, ಏಪ್ರಿಲ್ 9 : ‘ಕ್ರೀಡೆಯು ಶಿಕ್ಷಣದ ಅವಿಭಾಜ್ಯ ಅಂಗವಾಗಿದ್ದು, ಕ್ರೀಡಾಕೂಟಗಳು ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನದಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ’ ಎಂದು ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶೇಷಪ್ಪ ಗೌಡ ಅವರು ಹೇಳಿದರು. ಅವರು ಕನ್ಯಾನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

‘ಕ್ರೀಡೆ ಎಂದರೆ ಕೇವಲ ಗೆಲುವು-ಸೋಲಿನ ವಿಷಯವಲ್ಲ; ಭಾಗವಹಿಸುವಿಕೆ ಮುಖ್ಯ’ ಎಂದು ಮುಖ್ಯ ಅತಿಥಿ ಕನ್ಯಾನ ಪಂಚಾಯತ್ ಸದಸ್ಯರಾಗಿದ್ದ ಅಬ್ದುಲ್ ಮಜೀದ್ ಅವರು ನುಡಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಚೈತ್ರಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿಗಳಾದ ಶರಣ್ಯ ಮತ್ತು ಬಳಗ ಪ್ರಾರ್ಥಿಸಿ, ಕನ್ನಡ ಉಪನ್ಯಾಸಕಿ ಡಾ. ಮೈತ್ರಿ ಭಟ್ ನಿರೂಪಿಸಿದರು.

- Advertisement -

Related news

error: Content is protected !!