ಜಿಲ್ಲಾ ಸಂಪರ್ಕ ಅಧಿಕಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸುದರ್ಶನ್ ಪಡಿಯಾರ್ ವಿಟ್ಲ ಇವರಿಗೆ ಸನ್ಮಾನ





ವಿಟ್ಲ: ಲಯನ್ಸ್ ಜಿಲ್ಲಾ ರಾಜ್ಯಪಾಲ ಕುಡ್ಪಿ ಅರವಿಂದ ಶೆಣೈಯವರು ಲಯನ್ಸ್ ಕ್ಲಬ್ ವಿಟ್ಲ ಸಿಟಿಗೆ ಅಧಿಕೃತ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಸಂಪರ್ಕ ಅಧಿಕಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಪುರಸ್ಕೃತ, ಕನ್ನಡ ಪುರಸ್ಕೃತ ಸುದರ್ಶನ್ ಪಡಿಯಾರ್ ವಿಟ್ಲ ಇವರನ್ನು ಸನ್ಮಾನಿಸಿ ಗೌರವಿಸಿದರು.

ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಶ್ವೇತಾ ರವಿಕುಮಾರ್ ವಹಿಸಿದರು. ಕಾರ್ಯಕ್ರಮದಲ್ಲಿ ದ್ವಿತೀಯ ಉಪರಾಜ್ಯಪಾಲ ಗೋವರ್ಧನ್ ಶೆಟ್ಟಿ ಕೋಶಾಧಿಕಾರಿ ಬಾಲಕೃಷ್ಣ ಹೆಗಡೆ ರಾಜ್ಯಪಾಲರ ಸಂಯೋಜಕ ಜ್ಯೋತಿ ಶ್ರೀಧರ್ ಶೆಟ್ಟಿ, ಪ್ರಾಂತೀಯ ಅಧ್ಯಕ್ಷೆ ಮಲ್ಲಿಕಾ ಭಂಡಾರಿ, ವಲಯ ಅಧ್ಯಕ್ಷ ವಸಂತ್ ಶೆಟ್ಟಿ ಎರ್ಮಿನಿಲಿ, ಕಾರ್ಯದರ್ಶಿ ದಿನಕರ್ ಆಳ್ವಾ, ಕೋಶಾಧಿಕಾರಿ ಸಂದೇಶ್ ಶೆಟ್ಟಿ, ಕ್ಲಬ್ ನ ಸದಸ್ಯರುಗಳು, ಜಿಲ್ಲೆಯ ವಿವಿಧ ಕ್ಲಬ್ ಗಳ ಪದಾಧಿಕಾರಿಗಳು ಮತ್ತು ಸದಸ್ಯರು ಊರ ನಾಗರಿಕರು ಶಾಲಾ ಸಂಚಾಲಕ ರಾಧಾಕೃಷ್ಣ ನಾಯಕ್ ಮುಂತಾದವರು ಉಪಸ್ಥಿತರಿದ್ದರು.








