Wednesday, July 22, 2026
spot_imgspot_img
spot_imgspot_img

ವಿಟ್ಲ: ಕೋಳಿ ಅಂಕದ ಅಡ್ಡೆಗೆ ಪೋಲಿಸ್‌ ದಾಳಿ – ನಾಲ್ವರ ಬಂಧನ, ಇಬ್ಬರಿಂದ ಕರ್ತವ್ಯಕ್ಕೆ ಅಡ್ಡಿ

- Advertisement -
- Advertisement -

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲಕಸಬ ಗ್ರಾಮದ ಮಾಡ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕದ ಅಡ್ಡೆಗೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರು ಪರಾರಿಯಾಗಿದ್ದಾರೆ.

ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣ ಮತ್ತು ಸಿಬ್ಬಂದಿ ತಂಡ ದಿನಾಂಕ 12-04-2026ರ ಸಂಜೆ ಸ್ಥಳಕ್ಕೆ ದಾಳಿ ನಡೆಸಿದೆ. ಪೊಲೀಸರು ಸ್ಥಳಕ್ಕೆ ತಲುಪಿದಾಗ ಸುಮಾರು 20 ರಿಂದ 25 ಜನರ ಗುಂಪು ಸೇರಿ ಕೋಳಿ ಅಂಕದಲ್ಲಿ ತೊಡಗಿರುವುದು ಕಂಡುಬಂದಿದ್ದು, ಪೊಲೀಸರನ್ನು ಕಂಡ ಕೂಡಲೇ ಜೂಜುಕೋರರು ಓಡಲು ಆರಂಭಿಸಿದ್ದಾರೆ.

ಈ ಸಂದರ್ಭದಲ್ಲಿ ವಿಟ್ಲಕಸಬ ನಿವಾಸಿಗಳಾದ ಚಂದ್ರಶೇಖರ (43), ಇಬ್ರಾಹಿಂ (65), ಹೊನ್ನಪ್ಪ (46) ಮತ್ತು ವಿಟ್ಲಪಡ್ನರು ನಿವಾಸಿ ಚಂದ್ರಹಾಸ (32) ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಉಳಿದ ಆರೋಪಿಗಳನ್ನು ಹಿಡಿಯಲು ಪೊಲೀಸರು ಮುಂದಾದಾಗ ಬಾಬಣ್ಣ ಮತ್ತು ಹೊನ್ನಪ್ಪ ಹರಿಜನ ಎಂಬವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಕಾರ್ಯಾಚರಣೆಯ ವೇಳೆ ಜೂಜಾಟಕ್ಕೆ ಬಳಸಿದ್ದ 3 ಕೋಳಿಗಳು, 1000 ರೂ. ನಗದು ಹಾಗೂ ಇತರೆ ಪರಿಕರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 90/2026 ರಂತೆ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87, 93, ಪ್ರಾಣಿ ಹಿಂಸೆ ತಡೆ ಕಾಯ್ದೆಯ ಕಲಂ 3, 11 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಕಲಂ 112, 221 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

- Advertisement -

Related news

error: Content is protected !!