- Advertisement -
- Advertisement -





ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ದೂದಿಹಳ್ಳಿಯ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆಯಾಗಿದೆ.
ಗ್ರಾಮದ ಬಳಿ ಇರುವ ಬಾಳೆ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ ಬಸವಣ್ಣ ಮೂರ್ತಿ ಪತ್ತೆಯಾಗಿದೆ. ಸುಮಾರು 3 ಅಡಿ ಎತ್ತರದ ಬಸವಣ್ಣ ಮೂರ್ತಿ ಪತ್ತೆಯಾಗಿದ್ದು, ಬಸವಣ್ಣನ ಮೂರ್ತಿಗೆ ಪೂಜೆ ಸಲ್ಲಿಸಿದ್ದು, ಗ್ರಾಮದ ದೇವಸ್ಥಾನ ಬಳಿ ಪ್ರತಿಷ್ಠಾನ ಮಾಡಿ ಪೂಜೆ ಮಾಡಲು ನಿರ್ಧಾರ ಮಾಡಿದ್ದಾರೆ.
ಕೆರೆಯಲ್ಲಿ ಹೂಳು ತೆಗೆಯುವ ಕಾರ್ಯ ಮತ್ತೆ ಪ್ರಾರಂಭವಾಗಿದ್ದು, ಇನ್ನೂ ಏನಾದರೂ ಪುರಾತನ ಕಾಲದ ಮೂರ್ತಿಗಳು ಸಿಗಬಹುದು ಎನ್ನುವ ಉದ್ದೇಶದಿಂದ ಹೂಳು ತೆಗೆಯುವ ಕಾರ್ಯವನ್ನು ಮುಂದುವರಿಸಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.
- Advertisement -








