- Advertisement -
- Advertisement -




ಮಂಗಳೂರು: ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಮುಳಿಹಿತ್ಲು ನಿವಾಸಿ ಗೋಪಾಲ್ (29) ಮೃತ ದುರ್ದೈವಿ.
ಗೋಪಾಲ ಅವರು ಗುರುಪುರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಅಪಘಾತದಲ್ಲಿ ಮತ್ತೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ ಎಂದು ಹೇಳಲಾಗಿದೆ. ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








