- Advertisement -
- Advertisement -

ಕಲಬುರಗಿ: ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಇಬ್ಬರು ಬಾಲಕಿಯರ ಮೃತದೇಹಗಳು ಹೊಂಡದಲ್ಲಿ ಪತ್ತೆಯಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ಹೊರವಲಯದ ಹೊಂಡದಲ್ಲಿ ಬಾಲಕಿಯರಿಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಅವರ ಕೈಗಳಿಗೆ ಬಟ್ಟೆ ಕಟ್ಟಿದ ಸ್ಥಿತಿಯಲ್ಲಿ ಕಂಡುಬಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.ರವಿವಾರ ಸಂಜೆ ಶೌಚಾಲಯಕ್ಕಾಗಿ ಹೊರಗಡೆ ತೆರಳಿದ ಬಾಲಕಿಯರು ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಬಳಿಕ ಹೊಂಡ ಸಮೀಪ ಚಪ್ಪಲಿಗಳು ಪತ್ತೆಯಾಗಿದ್ದರಿಂದ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ, ಮೃತದೇಹಗಳನ್ನು ಹೊರತೆಗೆದಿದ್ದಾರೆ. ನಂತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
- Advertisement -








