Thursday, July 30, 2026
spot_imgspot_img
spot_imgspot_img

ವಿಟ್ಲ:ಮಗುವಿನ ಚಿನ್ನದ ಸರ ಕಳವು ಪ್ರಕರಣ-ಸಾಮಾಜಿಕ ಜಾಲತಾಣದಲ್ಲಿ ವೈರಲ್ ಭಾವಚಿತ್ರ ವ್ಯಕ್ತಿಗೆ ಸಂಬಂಧ ಇಲ್ಲವೆಂದು ಪೋಲಿಸ್ ಸ್ಪಷ್ಟನೆ

- Advertisement -
- Advertisement -

ವಿಟ್ಲ: ಏಪ್ರಿಲ್12 ರಂದು ವಿಟ್ಲ ಠಾಣಾ ವ್ಯಾಪ್ತಿಯ ಕೋಡಪದವು ಪ್ರದೇಶದಲ್ಲಿ 7 ವರ್ಷದ ಮಗುವಿನ ಕುತ್ತಿಗೆಯಲ್ಲಿದ್ದ ಸುಮಾರು 7 ಗ್ರಾಂ ತೂಕದ ಚಿನ್ನದ ಸರವನ್ನು ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಬೆದರಿಸಿ ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 91/2026, ಕಲಂ 309(4) BNS 2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕೆ.ಟಿ.ಎಂ ಬೈಕ್ ಸವಾರನೊಬ್ಬನ ಭಾವಚಿತ್ರ ವೈರಲ್ ಆಗಿದ್ದು,ವಿಟ್ಲ ಪೊಲೀಸರು ಆತನನ್ನು ವಿಚಾರಣೆ ನಡೆಸಿದಾಗ, ಈತನಿಗೂ ಘಟನೆಗೂ ಯಾವುದೇ ಸಂಬಂಧ ಇಲ್ಲವೆಂದು ಸ್ಪಷ್ಟವಾಗಿದೆ.

ಸದ್ರಿ ಬೈಕ್ ಸವಾರನ ಬಗ್ಗೆ ತಪ್ಪು ಅಭಿಪ್ರಾಯಗಳು ಮೂಡಬಾರದೆಂಬ ಹಿನ್ನೆಲೆಯಲ್ಲಿ, ಆತನ ಕುಟುಂಬದವರ ಮನವಿಯ ಮೇರೆಗೆ ಪೊಲೀಸರು ಈ ಸ್ಪಷ್ಟೀಕರಣ ನೀಡಿದ್ದಾರೆ. ಪ್ರಕರಣದ ನಿಜವಾದ ಆರೋಪಿಯನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.

- Advertisement -

Related news

error: Content is protected !!