Monday, July 20, 2026
spot_imgspot_img
spot_imgspot_img

ಪಿಯುಸಿಯ ಎರಡೂ ಪರೀಕ್ಷೆಗಳಲ್ಲಿ ಪಡೆದ ಅಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ

- Advertisement -
- Advertisement -

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು ಪರೀಕ್ಷೆ-2 ಅನ್ನು ನಡೆಸಲಾಗುತ್ತಿದ್ದು, ವಿದ್ಯಾರ್ಥಿಗಳು ಎರಡು ಪರೀಕ್ಷೆಗಳ ಪೈಕಿ ಯಾವ ಪರೀಕ್ಷೆಯಲ್ಲಿ ಅಧಿಕ ಅಂಕಗಳನ್ನು ಪಡೆಯುತ್ತಾರೋ, ಆ ಅಂಕಗಳನ್ನೇ ಸಿಇಟಿ ಪರೀಕ್ಷೆಯ ಫಲಿತಾಂಶಕ್ಕೆ ಪರಿಗಣನೆ ಮಾಡಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಪ್ರಕಟಣೆ ಹೊರಡಿಸಿರುವ ಅವರು, ಕೆಲ ಅಭ್ಯರ್ಥಿಗಳು ಪರೀಕ್ಷೆ-1 ರಲ್ಲಿ ಪಡೆದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಎರಡನೇ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಅಂತಹವರಿಗೆ ಹಿಂದಿನ ವರ್ಷದಂತೆ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನು ಸಿಇಟಿ ರಾಂಕ್‍ಗೆ ಪರಿಗಣಿಸಲಾಗುತ್ತದೆ ಎಂದಿದ್ದಾರೆ.ದ್ವಿತೀಯ ಪಿಯುಸಿಯ ಎರಡೂ ಪರೀಕ್ಷೆಗಳ ಫಲಿತಾಂಶ ಬಂದ ನಂತರವೇ ಸಿಇಟಿ ಫಲಿತಾಂಶ ಪ್ರಕಟಿಸುವುದು. ಹೀಗಾಗಿ ಎರಡನೇ ಪರೀಕ್ಷೆಯ ಅಂಕಗಳನ್ನು ಪರಿಗಣಿಸುವುದಿಲ್ಲ ಎನ್ನುವುದು ಸುಳ್ಳು. ಇಂತಹ ವದಂತಿಗಳಿಗೆ ಕಿವಿ ಕೊಡಬೇಡಿ. ಹಾಗೆಯೇ ಕರ್ನಾಟಕ ರಾಜ್ಯ ಪಠ್ಯಕ್ರಮದ ಪಿಯುಸಿ ಅಭ್ಯರ್ಥಿಗಳಿಗೆ ಮಾತ್ರ ಈ ಎರಡು ಪರೀಕ್ಷೆಗಳ ನಿಯಮ ಅನ್ವಯವಾಗುತ್ತದೆ. ಉಳಿದಂತೆ ಕೇಂದ್ರ ಹಾಗೂ ಇತರ ರಾಜ್ಯಗಳ ಬೋರ್ಡ್ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

- Advertisement -

Related news

error: Content is protected !!