- Advertisement -
- Advertisement -






ಬಂಟ್ವಾಳ: ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಭಾರ ಮ್ಯಾನೇಜರ್ ವಿರುದ್ಧ ವಿಟ್ಲ ಪೋಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಬ್ಯಾಂಕ್ ನ ಅಧ್ಯಕ್ಷ ಪುಷ್ಪರಾಜ್ ಚೌಟ, ಸಿ.ಒ.ಯಶೋಧ, ಮಾನೇಜರ್ ಯತೀಶ್ ಡಿ.ಗೌಡ ವಿರುದ್ಧ ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 88/ 2026 ರಂತೆ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು, ಪ್ರಕರಣದ ತನಿಖೆ ಹಾಗೂ ಮುಂದಿನ ವಿಚಾರಣೆಗೆ ಸಂಬಂಧಿಸಿ ಪ್ರಕರಣದ ಆರೋಪಿಗಳು ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ರದ್ದುಮಾಡುವಂತೆ ಹೈಕೋರ್ಟು ರಿಟ್ ಪಿಟಿಷನ್ ಸಲ್ಲಿಸಿದ್ದರು.ಪ್ರಸ್ತುತ ಹೈಕೋರ್ಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ನೇರಳಕಟ್ಟೆ ಸಹಕಾರಿ ಸಂಘದ ಪರವಾಗಿ ಸುಪ್ರೀಂಕೋರ್ಟಿ ಹಿರಿಯ ನ್ಯಾಯವಾದಿ ಪಿ.ಪಿ.ಹೆಗ್ಡೆ ವಾದಿಸಿದ್ದರು.
- Advertisement -








