Tuesday, July 21, 2026
spot_imgspot_img
spot_imgspot_img

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ- ಚಾಲಕ ಸಾವು

- Advertisement -
- Advertisement -

ಬೆಳ್ತಂಗಡಿ: ನಾಯಿ ಅಡ್ಡ ಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಉರುಳಿಬಿದ್ದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ನಡೆದಿದೆ.

ನಾವರ ಗ್ರಾಮದ ಹಾರಡ್ಡೆ ನಿವಾಸಿ, ಆಟೋ ಚಾಲಕ ದೇವಪ್ಪ(37) ಮೃತರು.

ಇಂದು ಬೆಳಗ್ಗೆ ಅಳದಂಗಡಿ ಸತ್ಯದೇವತೆ ದೇವಸ್ಥಾನದ ಬಳಿ ಗುರುವಾಯನಕೆರೆ ಕಡೆಯಿಂದ ಅಳದಂಗಡಿ ಕಡೆ ಬಾಡಿಗೆ ಮಾಡಿ ವಾಪಸ್ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಾಯಿ ಅಡ್ಡಬಂದ ಪರಿಣಾಮ ಆಟೋ ರಿಕ್ಷಾ ಉರುಳಿಬಿದ್ದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ದೇವಪ್ಪ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ವೇಣೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!