Wednesday, July 22, 2026
spot_imgspot_img
spot_imgspot_img

ಕುರಿ ತೊಳೆಯಲು ಕೆರೆಗೆ ತೆರಳಿದ್ದ ಸಹೋದರರು ನೀರಿನಲ್ಲಿ ಮುಳುಗಿ ಸಾವು

- Advertisement -
- Advertisement -

ಹಾಸನ: ಕುರಿ ತೊಳೆಯಲು ಕೆರೆಗೆ ತೆರಳಿದ್ದ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್‌ ಗ್ರಾಮದಲ್ಲಿ ನಡೆದಿದೆ.ಮೃತರನ್ನು ಇಮ್ರಾನ್ (15) ಮತ್ತು ಯಾಸಿನ್ (13) ಎಂದು ಗುರುತಿಸಲಾಗಿದೆ. ಇಮ್ರಾನ್ 10ನೇ ತರಗತಿ ಮತ್ತು ಯಾಸಿನ್ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಬೇಸಿಗೆ ರಜೆಯ ಹಿನ್ನೆಲೆ ಮನೆಯಲ್ಲಿದ್ದ ಈ ಬಾಲಕರು, ತಮ್ಮ ಕುರಿಗಳನ್ನು ತೊಳೆಯಲೆಂದು ಗ್ರಾಮದ ಸಮೀಪವಿರುವ ಜಾವಗಲ್ ದೊಡ್ಡಕೆರೆಗೆ ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಯ ಆಳವಾದ ಭಾಗಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.ಒಬ್ಬರನ್ನು ರಕ್ಷಿಸಲು ಮತ್ತೊಬ್ಬರು ಮುಂದಾದಾಗ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಇಬ್ಬರ ಮತದೇಹಗಳನ್ನು ಹೊರತೆಗೆಯಲಾಯಿತು.ಈ ಕುರಿತು ಜಾವಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -

Related news

error: Content is protected !!