Wednesday, July 22, 2026
spot_imgspot_img
spot_imgspot_img

ಮೈಸೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಹತ್ಯೆಗೈದ ಪತ್ನಿ..!

- Advertisement -
- Advertisement -

ಮೈಸೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ.

ಕುರ್ಣೇಗಾಲದ ಜವರಪ್ಪ ಕೊಲೆಯಾದ ಪತಿ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್(32), ಕುರ್ಣೆಗಾಲ ಗ್ರಾಮದ ಅಮೃತಾ(26) ಬಂಧಿತ ಆರೋಪಿಗಳು.

ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಸಣ್ಣಪುಟ್ಟ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಗಲಾಟೆ ಆಗುತ್ತಿತ್ತು. 12 ದಿನಗಳ ಹಿಂದೆ ಮಕ್ಕಳೊಂದಿಗೆ ಹಬ್ಬಕ್ಕೆಂದು ಅಮೃತ ತವರಿಗೆ ಹೋಗಿದ್ದಳು. ಏ.16 ರಂದು ಹೆಂಡತಿ ಮನೆಗೆ ಹೋಗಿ ಬರುತ್ತೇನೆಂದು ಜವರಪ್ಪ ಹೋಗಿದ್ದು, ಅಲ್ಲಿ ಈ ಕೊಲೆ ನಡೆದಿದೆ. ಕೊಲೆ ಮಾಡಿ ಗ್ರಾಮದ ಸಮೀಪದ ರಸ್ತೆ ಬದಿಯಲ್ಲಿ ಮೃತದೇಹ ಬಿಸಾಕಿದ್ದರು.

ಅನುಮಾನಸ್ಪದ ರೀತಿಯಲ್ಲಿ ಜವರಪ್ಪ ಶವ ಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಸತ್ಯ ಬಯಲಾಗಿದೆ. ಆರೋಪಿ ಸಿದ್ದೇಶ್, ಮೃತನ ಪತ್ನಿ ಅಮೃತಾ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಗಂಡ ಇದ್ದರೆ ತಮ್ಮ ಸಂಬಂಧಕ್ಕೆ ಅಡ್ಡಿ ಆಗುತ್ತೆ ಅಂತ ಕೊಲೆಗೆ ಪ್ಲ್ಯಾನ್‌ ಮಾಡಿದ್ದರು ಎಂಬುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!