
ತುಂಬೆ : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತುಂಬೆ ವಿದ್ಯಾ ಸಂಸ್ಥೆ ಗಮನಾರ್ಹ ಸಾಧನೆ ಮಾಡಿದ್ದು, ಆಂಗ್ಲ ಹಾಗೂ ಕನ್ನಡ ಎರಡೂ ಮಾಧ್ಯಮ ವಿಭಾಗಗಳಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.ಆಂಗ್ಲ ಮಾಧ್ಯಮ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 74 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು, 27 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 40 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಈ ವಿಭಾಗದಲ್ಲಿ ದರ್ಶಿತ್ ಕೆ ಕುಳಾಲ್ 603/625 (96.48%) ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅಫೀಫಾ ಅಶ್ರಫ್ 610/625 (97.60%) ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ಫಾತಿಮತುಲ್ ಅಫ್ನಾ 597/625 (95.52%) ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.ಕನ್ನಡ ಮಾಧ್ಯಮ ವಿಭಾಗದಲ್ಲಿಯೂ 28 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, ಎಲ್ಲರೂ ಉತ್ತೀರ್ಣರಾಗಿದ್ದು ಶೇ.100 ಫಲಿತಾಂಶ ದಾಖಲಾಗಿದೆ. ಈ ವಿಭಾಗದಲ್ಲಿ 2 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕನ್ನಡ ಮಾಧ್ಯಮದಲ್ಲಿ ಸುಜನ್ 559/625 (89.44%) ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದಿದ್ದು, ತನ್ವಿ 554/625 (88.64%) ಅಂಕಗಳೊಂದಿಗೆ ದ್ವಿತೀಯ ಸ್ಥಾನ ಹಾಗೂ ಸಿಂಚನಾ 522/625 (83.52%) ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದ್ದು, ಈ ಯಶಸ್ಸಿಗೆ ಕಾರಣರಾದ ಅಧ್ಯಾಪಕ ವೃಂದ, ಸಿಬ್ಬಂದಿ ಹಾಗೂ ಪೋಷಕರಿಗೆ ಸಂಸ್ಥೆಯ ಅಧ್ಯಕ್ಷ ಬಿ. ಅಬ್ದುಲ್ ಸಲಾಂ ಅವರು ಅಭಿನಂದನೆ ಸಲ್ಲಿಸಿದ್ದಾರೆ.








