Sunday, July 26, 2026
spot_imgspot_img
spot_imgspot_img

ಹೆಲ್ಕೆಟ್ ಧರಿಸಿ ದೇವಸ್ಥಾನದ ಹುಂಡಿ ಕಳವು ಪ್ರಕರಣ-ಇಬ್ಬರ ಬಂಧನ

- Advertisement -
- Advertisement -

ಕುಂದಾಪುರ, ಎ.24: ಆಜಿ ಗ್ರಾಮದ ಉಮಾಮಹೇಶ್ವರದೇವಸ್ಥಾನದಲ್ಲಿ ಹೆಲೈಟ್ ಧರಿಸಿಕೊಂಡು ಬಂದು ಕಾಣಿಕೆ ಹುಂಡಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.

ಕಮಲಶಿಲೆ ಗ್ರಾಮದ ಎಳಬೇರು ನಿವಾಸಿ ಸಂದೀಪ ಆಚಾರಿ(28) ಹಾಗೂ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮುತ್ತಪ್ಪ ಶರಣಪ್ಪ ವಾಲಿಕರ್(40) ಬಂಧಿತ ಆರೋಪಿಗಳು.ಇವರು ಎ.20ರಂದು ಬೆಳಗ್ಗೆ ಹೆಲೈಟ್ ಧರಿಸಿ ದೇವಸ್ಥಾನದ ಹೊರ ಪೌಳಿಗೆ ಬಂದು ಕಾಣಿಕೆ ಹುಂಡಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್‌ನಲ್ಲಿ ಬಂಧಿಸಿ, ಕೃತಕ್ಕೆ ಬಳಸಿದ ಬೈಕ್‌ ಹಾಗೂ ಮೂರು ಮೊಬೈಲ್ ಫೋನ್ ಮತ್ತು ದೇವಸ್ಥಾನದ ಕಾಣಿಕೆ ಹುಂಡಿಯನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 1,50,000 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಕುಂದಾಪುರ ಡಿವೈಎಸ್ಪಿ ಎಚ್.ಡಿ.ಕುಲಕರ್ಣಿ ಹಾಗೂ ಕುಂದಾಪುರ ವೃತ್ತ ನಿರೀಕ್ಷಕ ಸಂತೋಷ್ ಎ.ಕಾಯ್ಕಣಿ ಮಾರ್ಗದರ್ಶನದಲ್ಲಿ ಶಂಕರನಾರಾಯಣ ಠಾಣಾ ಎಸ್ಸೆಗಳಾದ ಐ.ಆ‌ರ್.ಗಡೇಕ‌ರ್ ಮತ್ತು ಅಕ್ಷಯ ಕುಮಾರಿ, ಸಿಬ್ಬಂದಿ ಸಚಿನ್ ಶೆಟ್ಟಿ, ಜಯರಾಮ ನಾಯ್ಕ ಚೇತನ್ ಕುಮಾ‌ರ್, ನವೀನ್ ನಾಯ್ಕ, ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ಸಿಬ್ಬಂದಿ ಮೌನೇಶ್ ನಾಯ್ಕ ಜಿಲ್ಲಾ ತಾಂತ್ರಿಕ ವಿಭಾಗದ ದಿನೇಶ್ ಈ ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

Related news

error: Content is protected !!