Sunday, July 26, 2026
spot_imgspot_img
spot_imgspot_img

ಚಲಿಸುತ್ತಿದ್ದ ಕಾರಿನ ಮುಂದೆ ಬಿದ್ದ ಬೃಹತ್‌ ಮರ – ಪ್ರಯಾಣಿಕರು ಪಾರು

- Advertisement -
- Advertisement -

ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗ ಬೃಹತ್‌ ಮರವೊಂದು ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಬಳಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಏ.24ರ ಸಂಜೆ ಆಲ್ದೂರಿನಲ್ಲಿ ಭಾರೀ ಮಳೆ ಸುರಿಯುತ್ತಿತ್ತು. ಈ ವೇಳೆ ಕಾರಿನಲ್ಲಿ ಹಾಸನ ಮೂಲದ ನಾಲ್ವರು ಪ್ರಯಾಣಿಸುತ್ತಿದ್ದ ವೇಳೆ ಮರ ಬಿದ್ದಿದ್ದು, ಮರ ಬೀಳುವ ದೃಶ್ಯ ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಮರ ಬೀಳುತ್ತಿದ್ದಂತೆ ಚಾಲಕ ಕಾರನ್ನು ನಿಯಂತ್ರಣಕ್ಕೆ ತೆಗೆದುಕೊಂಡು ನಿಲ್ಲಿಸಿದ್ದರಿಂದ ಪ್ರಯಾಣಿಕರು ಪಾರಾಗಿದ್ದಾರೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!