Wednesday, July 22, 2026
spot_imgspot_img
spot_imgspot_img

ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

- Advertisement -
- Advertisement -

ಬೆಂಗಳೂರು: ಸ್ಕೂಟರ್‌ಗೆ ಬಿಎಂಟಿಸಿ ಬಸ್  ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ  ಮೃತಪಟ್ಟ ಘಟನೆ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಸಿರಿಶಾ (21) ಎಂದು ಗುರುತಿಸಲಾಗಿದೆ. ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿನಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಳು. ಈ ವೇಳೆ ಪಕ್ಕದಲ್ಲಿ ಬಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ವಿದ್ಯಾರ್ಥಿನಿ ನಿಯಂತ್ರಣ ತಪ್ಪಿ ಬಸ್ ಕೆಳಗೆ ಬಿದ್ದಿದ್ದಾಳೆ. ಕೆಳಗೆ ಬಿದ್ದ ವಿದ್ಯಾರ್ಥಿನಿ ತಲೆ ಮೇಲೆ ಬಸ್‌ನ ಚಕ್ರ ಹರಿದಿದೆ. ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಮೃತದೇಹವನ್ನು ಆರ್‌ಆರ್ ನಗರ ಮೆಡಿಕಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ‌‌. ಈ ಸಂಬಂಧ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಎಂಟಿಸಿ ಬಸ್ ಚಾಲಕ ಚಂದ್ರು ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!