Sunday, July 26, 2026
spot_imgspot_img
spot_imgspot_img

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ–1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಬೆಂಕಿಗಾಹುತಿ

- Advertisement -
- Advertisement -

ಹಾವೇರಿ: ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆ ಹಾಗೂ ಉಪಕರಣಗಳು ಸುಟ್ಟು ಭಸ್ಮವಾಗಿವೆ.

ವಿದ್ಯುತ್ ಶಾರ್ಟ್‌ಸರ್ಕ್ಯೂಟ್‌ನಿಂದ ಆಸ್ಪತ್ರೆಯ 2ನೇ ಮಹಡಿ ಹೊತ್ತಿ ಉರಿದಿದೆ. ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂ. ಮೌಲ್ಯದ ಔಷಧಿ, 50 ಲಕ್ಷ ರೂ. ಮೌಲ್ಯದ ಮಾತ್ರೆಗಳು, ವೈದ್ಯಕೀಯ ಉಪಕರಣಗಳು ಸೇರಿದಂತೆ ಸುಮಾರು ಒಂದು ಕೋಟಿ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಆಸ್ಪತ್ರೆಯಲ್ಲಿದ್ದ ಯಾವುದೇ ರೋಗಿಗಳಿಗೂ ತೊಂದರೆ ಆಗಿಲ್ಲ. ಸ್ಥಳಕ್ಕೆ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಹಾನಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅವಘಡ ನಡೆದಿದೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!