Wednesday, July 22, 2026
spot_imgspot_img
spot_imgspot_img

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

- Advertisement -
- Advertisement -

ಚಿಕ್ಕಮಗಳೂರು : ಚಾರ್ಮಾಡಿ ಘಾಟ್‌ನ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರವಿವಾರ ನಡೆದಿದೆ.

ಧರ್ಮಸ್ಥಳದಿಂದ ತುಮಕೂರಿನ ಪಾವಗಡ ಕಡೆಗೆ ಬಸ್‌ ಹೊರಟಿತ್ತು. ಬಸ್‌ನಲ್ಲಿ ಇದ್ದವರು ಧರ್ಮಸ್ಥಳದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ ತೆರಳುತ್ತಿದ್ದರು ಎನ್ನಲಾಗಿದೆ.

ಅಪಘಾತವಾದ ತಕ್ಷಣ ಗಾಯಾಳುಗಳನ್ನು ಆಂಬುಲೆನ್ಸ್‌ಗಳ ಮೂಲಕ ಕಕ್ಕಿಂಜೆಯ ಖಾಸಗಿ ಆಸ್ಪತ್ರೆ ಹಾಗೂ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!