Tuesday, July 21, 2026
spot_imgspot_img
spot_imgspot_img

ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡಿಸುವುದಕ್ಕೆ ನಿರ್ಬಂಧ : ರಾಜ್ಯ ಸರಕಾರ ಅದೇಶ

- Advertisement -
- Advertisement -

ಬೆಂಗಳೂರು : ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಂದ ಮತ್ತು ವಿದ್ಯಾರ್ಥಿಗಳಿಂದ ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡಿಸುವುದನ್ನು ನಿರ್ಬಂಧಿಸಿ ರಾಜ್ಯ ಸರಕಾರ ಅದೇಶ ಹೊರಡಿಸಿದೆ.ವಿದ್ಯಾರ್ಥಿಗಳಿಂದ ಶಾಲೆಗಳಲ್ಲಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಾಗ ಕೆಲವು ವೇಳೆ ಅಶ್ಲೀಲ ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲಾಗುತ್ತಿದೆ.

ಈ ರೀತಿ ನೃತ್ಯಗಳನ್ನು ಪ್ರದರ್ಶಿಸಿದರೆ ಮಕ್ಕಳ ಮಾನಸಿಕ ಆರೋಗ್ಯ ಮತ್ತು ನೈತಿಕ ಮೌಲ್ಯಗಳ ಮೇಲೆ ಕೆಟ್ಟ ಪರಿಣಾಮ ಬೀರಿದಂತಾಗುತ್ತದೆ. ಹೀಗಾಗಿ ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡಿಸುತ್ತಿರುವುದನ್ನು ನಿರ್ಬಂಧಿಸಲಾಗಿದೆ. ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಾಗ ಮಕ್ಕಳಿಂದ ಅಶ್ಲೀಲ ಹಾಡುಗಳಿಗೆ ನೃತ್ಯಗಳನ್ನು ಮಾಡಿಸುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಒಂದು ವೇಳೆ ಅಶ್ಲೀಲ ಹಾಡುಗಳಿಗೆ ಮಕ್ಕಳಿಂದ ನೃತ್ಯ ಮಾಡಿಸುವುದು ಕಂಡು ಬಂದಲ್ಲಿ ಅಂತಹ ಶಾಲಾ ಮುಖ್ಯ ಶಿಕ್ಷಕರು, ಆಡಳಿತ ಮಂಡಳಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಮಕ್ಕಳಿಗೆ ಸ್ಫೂರ್ತಿದಾಯಕ, ಸಕಾರಾತ್ಮಕ, ರಾಷ್ಟ್ರಾಭಿಮಾನ ಮೂಡಿಸುವ ಹಾಗೂ ಕನ್ನಡ ನಾಡಿನ ಹಿರಿಮೆ, ಗರಿಮೆ, ಮೌಲ್ಯಾಧಾರಿತ, ಸಂಸ್ಕಾರ, ನೈತಿಕತೆ ಇರುವಂತಹ ಹಾಡುಗಳನ್ನು ಆಯ್ಕೆ ಮಾಡಬೇಕು. ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಮತ್ತು ನೈತಿಕ ಮೌಲ್ಯಗಳನ್ನು ಬೆಳಸುವಂತಹ ಹಾಡುಗಳನ್ನು ಆಯ್ಕೆ ಮಾಡಬೇಕು ಎಂದು ಸಲಹೆ ನೀಡಿದೆ.

ಹಾಡುಗಳ ಮತ್ತು ನೃತ್ಯಗಳ ಆಯ್ಕೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾ ಆಡಳಿತ ಮಂಡಳಿ ಜವಾಬ್ದಾರಿಯನ್ನು ನಿಭಾಯಿಸಬೇಕು. ಮಕ್ಕಳು ಮತ್ತು ವಿದ್ಯಾರ್ಥಿಗಳು ನೃತ್ಯ ಕಾರ್ಯಕ್ರಮಗಳಲ್ಲಿ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಭ್ಯ ಉಡುಪುಗಳನ್ನು ಧರಿಸಲು ಕ್ರಮವಹಿಸಬೇಕು ಎಂದು ಸರಕಾರವು ಆದೇಶದಲ್ಲಿ ತಿಳಿಸಿದೆ.

- Advertisement -

Related news

error: Content is protected !!