Wednesday, July 22, 2026
spot_imgspot_img
spot_imgspot_img

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ ಗಾಯ

- Advertisement -
- Advertisement -

ಜಕಾರ್ತಾ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿದ್ದಾರೆ. ಜಕಾರ್ತಾ ಹೊರವಲಯದ ಬೆಕಾಸಿಯಲ್ಲಿ ಸೋಮವಾರ ತಡರಾತ್ರಿ ಪ್ರಯಾಣಿಕ ರೈಲು ಹಾಗೂ ಮತ್ತೊಂದು ರೈಲಿನ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಇನ್ನೂ ಹಲವು ಪ್ರಯಾಣಿಕರು ರೈಲಿನೊಳಗೆ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಲೆವೆಲ್ ಕ್ರಾಸಿಂಗ್‌ನಲ್ಲಿ ಟ್ಯಾಕ್ಸಿಯೊಂದು ಪ್ರಯಾಣಿಕರ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ರೈಲು ಹಳಿಯಲ್ಲಿ ನಿಂತಿತ್ತು. ಇದೇ ವೇಳೆಗೆ ಮತ್ತೊಂದು ರೈಲು ಬಂದು ಪ್ರಯಾಣಿಕ ರೈಲಿನ ಮಹಿಳೆಯರ ಬೋಗಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ರೈಲಿನ ಬೋಗಿಗಳು ಜಖಂಗೊಂಡು 7 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಹಲವರು ಬೋಗಿಯಲ್ಲೇ ಸಿಲುಕಿದ್ದಾರೆ. ಇಂಡೋನೇಷ್ಯಾದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಸಮಿತಿ ಅಪಘಾತದ ತನಿಖೆ ನಡೆಸುತ್ತಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!