Tuesday, July 21, 2026
spot_imgspot_img
spot_imgspot_img

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

- Advertisement -
- Advertisement -

ಹಾವೇರಿ: ನದಿಯಲ್ಲಿ ಸ್ನಾನ ಮಾಡಲು ಹೋಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕಿರಗೆರೆ ಗ್ರಾಮದ ಬಳಿ ಇರುವ ತುಂಗಭದ್ರಾ ನದಿಯಲ್ಲಿ ನಡೆದಿದೆ.

ಅಬ್ಬಾಸ್ ನಾಸೂರ್ (52) ಮೃತ ವ್ಯಕ್ತಿ. ಅಬ್ಬಾಸ್ ಮೂಲತಃ ಹಿರೇಕೆರೂರುಕೋಡ ಗ್ರಾಮದ ನಿವಾಸಿಯಾಗಿದ್ದು, ಮಂಗಳವಾರ ಕುಟುಂಬ ಸಮೇತ ಪಿಕ್ನಿಕ್ ಹೋಗಿದ್ದರು. ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ವೇಳೆ ನೀರಿನಲ್ಲಿ ಮುಳುಗಿ ದುರ್ಘಟನೆ ನಡೆದಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ನುರಿತ ಈಜು ತಜ್ಞರು ಹುಡುಕಾಟ ನಡೆಸಿದ್ದಾರೆ. ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!