



ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 29-4-2026ರಂದು SSLC ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿಗೆ ದ್ವೀತಿಯ ಸ್ಥಾನವನ್ನು ಪಡೆದ ದಯಾಳ್ ಕೆ (619)ಇವರನ್ನು ಶಿಕ್ಷಣ ಇಲಾಖೆಯ ವತಿಯಿಂದ ಸನ್ಮಾನಿಸಲಾಯಿತು.
ಪ್ರಭಾರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಮಾಲತಿಯವರು ಸನ್ಮಾನಿಸಿ, ಆಡಳಿತ ಮಂಡಳಿಯ ಬೆಂಬಲ ಹಾಗೂ ಶಿಕ್ಷಕರ ಮಾರ್ಗದರ್ಶನದಿಂದಾಗಿ ಈ ಶಾಲೆಯು ಸತತವಾಗಿ 100 ಶೇಕಡಾ ಫಲಿತಾಂಶವನ್ನು ಪಡೆಯಲು ಸಾಧ್ಯವಾಯಿತು. ಅಲ್ಲದೇ ಹಿಂದಿನ ಶೈಕ್ಷಣಿಕ ವರ್ಷಗಳಲ್ಲಿ ಎಸ್ ಎಸ್ ಎಲ್ ಸಿ ಯ ದಾಖಲೆಯ ಸಾಧನೆಯನ್ನು ಪ್ರಶಂಸಿಸಿದರು. ಜೇಸೀಸ್ ಶಾಲೆಯೊಂದಿಗಿನ ತನ್ನ ಒಡನಾಟದ ಬಗ್ಗೆ ಸಂತಸ ವ್ಯಕ್ತಪಡಿಸಿ ಇನ್ನು ಮುಂದೆಯೂ ಈ ಶಾಲೆ ಹೆಚ್ಚಿನ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು.
ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ರಾಧಾಕೃಷ್ಣ ಪೈ ಯವರು ಮಾತಾನಾಡಿ, ಶಾಲೆಯ ಶೈಕ್ಷಣಿಕ ಸಾಧನೆಗೆ ಸಂತಸ ವ್ಯಕ್ತಪಡಿಸಿದರು. ಶಾಲಾ ಪ್ರಾಶುಂಪಾಲರಾದ ಜಯರಾಮ ರೈ ಯವರು ಎಲ್ಲರನ್ನು ಸ್ವಾಗತಿಸಿ , ವಿದ್ಯಾರ್ಥಿಗಳ ಫಲಿತಾಂಶದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಇಲಾಖಾಧಿಕಾರಿಗಳಾದ ಶ್ರೀ ರಮಾನಂದ ಹಾಗೂ ಶ್ರೀಮತಿ ಸುಧಾ ಹಾಗೂ ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ, ಕಾರ್ಯದರ್ಶಿ ರಾಘವೇಂದ್ರ ಪೈ, ಹಿರಿಯ ನಿರ್ದೇಶಕರಾದ ಮೋನಪ್ಪ ಶೆಟ್ಟಿ ಉಪಸ್ಥಿತರಿದ್ದರು, ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಜರಿದ್ದರು.








