Monday, September 7, 2026
spot_imgspot_img
spot_imgspot_img

ಯಾದಗಿರಿಯಲ್ಲಿ ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ಸಾವು

- Advertisement -
- Advertisement -

ಯಾದಗಿರಿ: ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟೆ ಗ್ರಾಮದಲ್ಲಿ ನಡೆದಿದೆ.

ಸಿದ್ದಪ್ಪ ಕೊಂಡಗುಳಿ ಮೃತ ಕಾರ್ಮಿಕ ಕೂಲಿ ಕೆಲಸ ಮಾಡಿ ಮರಳಿ ಮನೆ ಬಂದಾಗ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನೆ ನಡೆದ ದಿನ ಮೃತ ಸಿದ್ದಪ್ಪ ಅವರು ಕೂಲಿ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಬಿಸಿಲು ಹೆಚ್ಚಾದ್ದರಿಂದ ಮನೆಗೆ ಮರಳಿದ್ದರು. ಮನೆಗೆ ಬಂದ ತಕ್ಷಣ ನೀರಿನ ದಾಹ ತಣಿಸಿಕೊಳ್ಳಲು ನೀರು ಕುಡಿದಿದ್ದರು. ಆದರೆ ನೀರು ಕುಡಿದ ಕೆಲ ಕ್ಷಣಗಳಲ್ಲೇ ಕುಸಿದು ಬಿದ್ದಿದ್ದು, ಮೃತಪಟ್ಟಿದ್ದಾರೆ.

ಮೃತ ಸಿದ್ದಪ್ಪ ಕುಟುಂಬಸ್ಥರು ಕಡುಬಡತನದಲ್ಲಿ ಜೀವನ ನಡೆಸುತ್ತಿದ್ದಾರೆ, ಸಿದ್ದಪ್ಪ ಸಾವಿನಿಂದ ಕುಟುಂಬಕ್ಕೆ ಆಘಾತವನ್ನುಂಟು ಮಾಡಿದೆ. ಸರ್ಕಾರ ಕೂಡಲೇ ಮೃತ ಕುಟುಂಬಸ್ಥರಿಗೆ ಸಹಾಯ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಆಗ್ರಹಿಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!