Tuesday, July 21, 2026
spot_imgspot_img
spot_imgspot_img

ಮದುವೆ ಸಾಲ ತೀರಿಸಲು ಮಗಳ ಮನೆಯಿಂದ 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ ಕಳ್ಳತನ

- Advertisement -
- Advertisement -

ಬೆಳಗಾವಿ: ಮದುವೆ ಸಾಲ ತೀರಿಸಲು ಮಗಳ ಮನೆಯಿಂದ 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ ಕಳ್ಳತನ ಮಾಡಿ
ಸಿಕ್ಕಿಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಪಿರಣವಾಡಿ ನಿವಾಸಿ ಉಜ್ವಲಾ ಕಮ್ಮಾರ ಪುತ್ರಿಯರ ಮದುವೆ ಸಾಲ ತೀರಿಸಲು ಹಿರಿಯ ಅಳಿಯನ ಮನೆಯಲ್ಲಿ ಕಳ್ಳತನ ಮಾಡಿದ್ದಾಳೆ. ಮಗಳು – ಅಳಿಯ ಸ್ನೇಹಿತರ ಮದುವೆಗೆಂದು ಹೋಗಿದ್ದರು ಎನ್ನಲಾಗಿದೆ. ಈ ವೇಳೆ ಮನೆಯಲ್ಲಿದ್ದ ಪುತ್ರಿಯ ಚಿನ್ನದ ಬಳೆ, ಉಂಗುರ, ನೆಕ್ಲೆಸ್, ಗಂಟನ್ ಸೇರಿ 16.57 ಲಕ್ಷ ರೂ. ಮೌಲ್ಯದ 110 ಗ್ರಾಂ ಚಿನ್ನಾಭರಣವನ್ನು ಉಜ್ವಲಾ ಎಗರಿಸಿದ್ದಾಳೆ. ಮದುವೆ ಮುಗಿಸಿ ಮನೆಗೆ ಬಂದು ನೋಡಿದಾಗ ಚಿನ್ನಾಭರಣ ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ.

ಚಿನ್ನಾಭರಣ ಕಳ್ಳತನ ಆದ ಬಗ್ಗೆ ಅತ್ತೆಯನ್ನು ವಿಚಾರಿಸಿದಾಗ ಅತ್ತೆ ನನಗೆ ಗೊತ್ತಿಲ್ಲ ಎಂದಿದ್ದಾಳೆ. ಕಳ್ಳತನ ಸಂಬಂಧ ಟಿಳಕವಾಡಿ ಠಾಣೆ ಪೊಲೀಸರಿಗೆ ಅಳಿಯ ದೂರು ನೀಡಿದ್ದಾನೆ. ದೂರು ದಾಖಲಿಸಿಕೊಂಡು ತೀವ್ರ ವಿಚಾರಣೆ ನಡೆಸಿದಾಗ ತಾನೇ ಕಳ್ಳತನ ಮಾಡಿರುವುದಾಗಿ ಅತ್ತೆ ಬಾಯ್ಬಿಟ್ಟಿದ್ದಾಳೆ. ತಕ್ಷಣವೇ ಅತ್ತೆ ಉಜ್ವಲ ಹಾಗೂ ಸಂಬಂಧಿ ಶಿವ ಬಳಿಯಿದ್ದ ಚಿನ್ನಾಭರಣ ವಶಪಡಿಸಿಕೊಂಡು ಪೊಲೀಸರು ಬಂಧಿಸಿದ್ದಾರೆ. ಸದ್ಯ ಟಿಳಕವಾಡಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!