Sunday, July 26, 2026
spot_imgspot_img
spot_imgspot_img

ಬೆಳಗಾವಿ:ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು

- Advertisement -
- Advertisement -

ಬೆಳಗಾವಿ: ಈಜಲು ಹೋಗಿದ್ದ ಇಬ್ಬರು ಅಪ್ರಾಪ್ತ ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಗರದ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಕಪಿಲೇಶ್ವರ ಹೊಂಡದಲ್ಲಿ ನಡೆದಿದೆ.

ನಗರದ ಶಿವಾಜಿ ನಗರದ ನಿವಾಸಿ ಶಿವಂ ಪರಶುರಾಮ ಸುಂಡೀಕರ್ (07) ಮತ್ತು ಶಹಾಪುರ ಜೇಡಗಲ್ಲಿಯ ನಿವಾಸಿ ಪರಶುರಾಮ ರಾಜು ನೀಲಜಕರ್ (11) ಮೃತಪಟ್ಟವರು.

ಬೇಸಿಗೆಯ ಹಿನ್ನೆಲೆ ಈಜಲು ತೆರಳಿದ್ದ ಬಾಲಕರು ನೀರಿನ ಆಳ ತಿಳಿಯದೇ ಮುಳುಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿ ಧಾವಿಸಿ ಸತತ ಕಾರ್ಯಾಚರಣೆ ನಡೆಸಿದರು.

ಸುದೀರ್ಘ ಕಾರ್ಯಾಚರಣೆಯ ನಂತರ ಏಳು ವರ್ಷದ ಬಾಲಕ ಶಿವಂ ಸುಂಡೀಕರ್ ಮೃತದೇಹ ಪತ್ತೆಯಾಗಿದೆ. ಶಿವಂ ನೀರಿನಲ್ಲಿ ಬಿದ್ದಾಗ ತಲೆಗೆ ಕಲ್ಲಿನ ಪೆಟ್ಟು ಬಿದ್ದಿದ್ದರಿಂದ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇನ್ನೊಬ್ಬ ಬಾಲಕ ಪರಶುರಾಮನಿಗಾಗಿ ಎಸ್‌ಡಿಆರ್‌ಎಫ್ ತಂಡದ ಶೋಧ ಕಾರ್ಯ ಮುಂದುವರೆದಿದೆ.

ಬಾಲಕರು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ಪೋಷಕರು ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -

Related news

error: Content is protected !!