Monday, September 14, 2026
spot_imgspot_img
spot_imgspot_img

ಗದಗಕ್ಕೆ ಹೋಗುತ್ತಿದ್ದ ಕೆಎಸ್ ಆರ್‍ ಟಿ ಸಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

- Advertisement -
- Advertisement -

ಹಾವೇರಿ: ಬೆಂಗಳೂರಿನಿಂದ ಗದಗ ನಗರಕ್ಕೆ ಹೋಗುತ್ತಿದ್ದ ಸಾರಿಗೆ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಬಳಿ ರಾಜ್ಯಹೆದ್ದಾರಿಯಲ್ಲಿ ನಡೆದಿದೆ.

ಕ್ಷಣಾರ್ಧದಲ್ಲಿ ಈ ದುರ್ಘಟನೆ ನಡೆದಿದ್ದು ದೊಡ್ಡ ದುರಂತ ತಪ್ಪಿದ್ದು, ಚಾಲಕನ ಸಮಪ್ರಜ್ಜೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ಗದಗ ಹೊರಟಿದ್ದ (KA-57-F6680) ಸಂಖ್ಯೆಯ ಪಲ್ಲಕ್ಕಿ ಬಸ್‌ನಲ್ಲಿ ಸುಮಾರು 17 ಹೆಚ್ಚು ಪ್ರಯಾಣಿಕರು ಗದಗ ಕಡೆಗೆ ಪ್ರಯಾಣಿಸುತ್ತಿದ್ದರು. ಬ್ರೇಕ್ ಲೈನ್ ದೋಷದಿಂದ ಬೆಂಕಿ ಅವಘಡ ಸಂಭವಿಸಿದ್ದು ಎನ್ನಲಾಗಿದೆ.

ಬಸ್ ಚಾಲಕ ಪಕ್ಕೀರಪ್ಪ ಬೆಂಕಿ ನಂದಿಸಲು ಹರಸಹಾಸ ಪಟ್ಟಿದ್ದಾರೆ‌. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!