- Advertisement -
- Advertisement -


ಕಡಬ: ಮನೆ ನಿರ್ಮಾಣ ಸ್ಥಳದಲ್ಲಿ ಬೋರ್ವೆಲ್ ಮೂಲಕ ನೀರು ಸಿಕ್ಕ ವಿಚಾರಕ್ಕೆ ಸಂಬಂಧಿಸಿದ ಅಸೂಯೆಯಿಂದ, ಮಹಿಳೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿ ನಡೆದಿದೆ.





ಐತ್ತೂರು ನಿವಾಸಿ ಬೇಬಿ ಕೆ.ಎಸ್. (35) ಅವರು ನೀಡಿದ ದೂರಿನಂತೆ, ಅವರ ಗಂಡನ ಸಹೋದರನಾದ ಕುಸುಮಾಧರ (37) ಎಂಬಾತನು ಮೇ 6ರ ಬೆಳಿಗ್ಗೆ ಕ್ಯಾನ್ನಲ್ಲಿ ಪೆಟ್ರೋಲ್ ತೆಗೆದುಕೊಂಡು ಬಂದು ಪಿರ್ಯಾದಿದಾರರ ಮೇಲೆ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಬೊಬ್ಬೆ ಹಾಕಿದ ಪರಿಣಾಮ, ಸಂಬಂಧಿಕರು ಹಾಗೂ ನೆರೆಮನೆಯವರು ಸ್ಥಳಕ್ಕೆ ಧಾವಿಸಿದ್ದಾರೆ.
ಜನರು ಬರುತ್ತಿರುವುದನ್ನು ಗಮನಿಸಿದ ಆರೋಪಿಯು ಪೆಟ್ರೋಲ್ ಕ್ಯಾನ್ ಹಾಗೂ ಬೆಂಕಿ ಪೊಟ್ಟಣವನ್ನು ಅಲ್ಲೇ ಬಿಸಾಡಿ ಪರಾರಿಯಾಗಿದ್ದಾನೆ.
ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 57/2026, ಕಲಂ 109(1) BNS-2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
- Advertisement -








