- Advertisement -
- Advertisement -





ಬೆಂಗಳೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ವಾಹನ ಗುದ್ದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು (ಶುಕ್ರವಾರ) ಮುಂಜಾನೆ ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಾಹನ ಗುದ್ದಿದ ರಭಸಕ್ಕೆ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶ್ರೀನಿವಾಸ್ ಮೃತ ದುರ್ದೈವಿ. ಅಪಘಾತ ನಡೆದ ಬಳಿಕ ವಾಹನ ಸವಾರನೂ ಎಸ್ಕೇಪ್ ಆಗಿದ್ದಾನೆ.
ಈ ಸಂಬಂಧ ಬಿಎನ್‌ಎಸ್ ಸೆಕ್ಷನ್ 106 ಅಡಿ ಪ್ರಕರಣ ದಾಖಲಿಸಿಕೊಂಡಿರುವ ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು, ತನಿಖೆಗೆ ಮುಂದಾಗಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸುತ್ತಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








