- Advertisement -
- Advertisement -





ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರ ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ.
ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ(ಮೇ10) ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಸದ್ಯ ವಿಜಯ್ ಅವರು ತಮ್ಮ ಸಂಪುಟದಲ್ಲಿ 9 ಮಂದಿ ಶಾಸಕರಿಗೆ ಮಂತ್ರಿಗಿರಿ ನೀಡಿದ್ದಾರೆ. ಟಿವಿಕೆಗೆ ಬೆಂಬಲ ನೀಡಿದ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ವಿಸಿಕೆ , ಸಿಪಿಐ, ಸಿಪಿಎಂ ಮತ್ತು ಮುಸ್ಲಿಂ ಲೀಗ್ ಪಕ್ಷಗಳು ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದರಿಂದ ಈ ಪಕ್ಷಗಳ ಶಾಸಕರು ಸಂಪುಟ ಸೇರುತ್ತಿಲ್ಲ.
ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ವಿಸಿಕೆ ಬೇಡಿಕೆ ಇಟ್ಟಿದೆ ಎಂದು ಹೇಳಲಾಗಿತ್ತು. ಆದರೆ ವಿಜಯ್ ಸರ್ಕಾರದಲ್ಲಿ ಸದ್ಯಕ್ಕೆ ಯಾರಿಗೂ ಡಿಸಿಎಂ ಸ್ಥಾನ ನೀಡಿಲ್ಲ.
- Advertisement -








