- Advertisement -
- Advertisement -
ಮೈಸೂರು, ಮೇ.14 : “ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ನಗರದ ಟಿ.ಕೆ.ಲೇಔಟ್ ನಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ಬೆಳಿಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಎಂದು ಹೇಳಿದರು.
ಕೇಸರಿ ಶಾಲು ಧರಿಸುವಂತಿಲ್ಲ, ಆದರೆ ಜನಿವಾರ, ಉಡುದಾರ, ಹಿಜಾಬ್, ರುದ್ರಾಕ್ಷಿ ಹಾಕಿಕೊಂಡು ಬರಬಹುದು. ಅವರವರ ನಂಬಿಕೆಗಳಿಗೆ ಅನುವಾಗುವ ಆಚರಣೆಯಲ್ಲಿರುವ ಧಾರ್ಮಿಕ ಸಂಕೇತಗಳನ್ನಷ್ಟೇ ಹಾಕಿಕೊಳ್ಳಬಹುದು ಹೊಸದಾಗಿ ಹಾಕಿಕೊಳ್ಳುವಹಾಗಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

- Advertisement -








