Wednesday, July 22, 2026
spot_imgspot_img
spot_imgspot_img

ಮಂಗಳೂರು: ಮೇರಿಹಿಲ್‌ನಲ್ಲಿ ಗಾಂಜಾ ಸಾಗಾಟ: 3 ಕೆಜಿ 138 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

- Advertisement -
- Advertisement -

ಮಂಗಳೂರು: ಗಾಂಜಾ ಮಾದಕ ವಸ್ತುವನ್ನು ಸಾಗಾಟ ಮಾಡಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸಿರುವ ಕಾವೂರು ಪೊಲೀಸರು, ಸುಮಾರು ₹1.56 ಲಕ್ಷ ಮೌಲ್ಯದ 3 ಕೆಜಿ 138 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಉಳ್ಳಾಲ ಮುಕ್ಕಚೇರಿಯ ಹಿಲರಿಯ ನಗರ ನಿವಾಸಿ ಇರ್ಷಾದ್ @ ಇರ್ಷಾ (26) ಎಂದು ಗುರುತಿಸಲಾಗಿದೆ.ಮೇ 13ರಂದು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೇರಿಹಿಲ್ ಹ್ಯಾಲಿಪ್ಯಾಡ್ ಮೈದಾನದ ಬಳಿ ಮೇರಿಹಿಲ್ ಕಡೆಗೆ ಹೋಗುವ ಸಾರ್ವಜನಿಕ ರಸ್ತೆಯ ಎಡಬದಿಯಲ್ಲಿ ಗಾಂಜಾ ಮಾರಾಟಕ್ಕೆ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದರು.ಆರೋಪಿಯಿಂದ 3 ಕೆಜಿ 138 ಗ್ರಾಂ ತೂಕದ ಗಾಂಜಾ, ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್, ಸ್ಕೂಟರ್ ಸೇರಿದಂತೆ ಇತರ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ.

ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ.74/2026ರಡಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c), 20(b)(ii)(B) ಅಡಿ ಪ್ರಕರಣ ದಾಖಲಾಗಿದೆ. ಪಣಂಬೂರು ಎಸಿಪಿ ತಂಡ ಹಾಗೂ ಕಾವೂರು ಠಾಣಾ ಪೊಲೀಸರು ಸಂಯುಕ್ತವಾಗಿ ಕಾರ್ಯಾಚರಣೆ ನಡೆಸಿದರು.ಆರೋಪಿಯ ವಿರುದ್ಧ ಈ ಹಿಂದಿನ ಪ್ರಕರಣಗಳುಉಳ್ಳಾಲ ಪೊಲೀಸ್ ಠಾಣೆ: ಅ.ಕ್ರ.106/2019 – ಕಲಂ 307 ಹಾಗೂ Arms Actಮಂಗಳೂರು ಸಿಸಿಬಿ ಪೊಲೀಸ್ ಠಾಣೆ: Crime No.06/2024 – NDPS Act ಕಲಂ 8(c), 20(b)

- Advertisement -

Related news

error: Content is protected !!