Sunday, September 13, 2026
spot_imgspot_img
spot_imgspot_img

ವಿಜಯಪುರ: ಭಾರೀ ಗಾಳಿ ಮಳೆಗೆ ಮನೆ ಮೇಲ್ಛಾವಣಿ ಕುಸಿತ – ಒಂದೇ ಕುಟುಂಬದ ನಾಲ್ವರು ದುರ್ಮರಣ

- Advertisement -
- Advertisement -

ವಿಜಯಪುರ: ಭಾರೀ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ ಬಡಿಗೇರ (9) ಎಂದು ಗುರುತಿಸಲಾಗಿದೆ. ತಮ್ಮ ಮನೆಯ ದುರಸ್ಥಿ ಮಾಡಿಸುತ್ತಿದ್ದ ಗುರುನಾಥ ಬಡಿಗೇರ, ಹಳೆಯ ಮನೆಯೊಂದರಲ್ಲಿ ಬಾಡಿಗೆಗೆ ಇದ್ದರು. ಗುರುವಾರ ರಾತ್ರಿ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು, ಈ ದುರಂತ ಸಂಭವಿಸಿದೆ.

ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ನಾಲ್ವರ ಶವ ಹೊರ ತೆಗೆಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!