- Advertisement -
- Advertisement -






ಚಿಕ್ಕಬಳ್ಳಾಪುರ: ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ವನ್ಯಜೀವಿಗಳನ್ನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಬ್ಯಾಂಕಾಕ್ ನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಕೆಂಪು ಪಾದದ ಆಮೆಗಳು, ಆಫ್ರಿಕನ್ ಆಮೆಗಳು, ಅರ್ಜೆಂಟಿನಾ ಕಪ್ಪು-ಬಿಳಿ ತೇಗು, ಗೋಲ್ಡೀಸ್ ಮಾರ್ಮೋಸೆಟ್ ಸೇರಿದಂತೆ 47 ವನ್ಯ ಜೀವಿಗಳನ್ನ ವಶಕ್ಕೆಪಡೆದುಕೊಂಡಿದ್ದಾರೆ. ಕಸ್ಟಮ್ಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಯನ್ನ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ (Wildlife Protection Act) ಮುಂದಿನ ಕಾನೂನು ಕ್ರಮಕ್ಕಾಗಿ ಬೆಂಗಳೂರು ಗ್ರಾಮಾಂತರ ಆರ್ಎಫ್ಇ ವಶಕ್ಕೆ ನೀಡಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.
- Advertisement -








