Sunday, August 9, 2026
spot_imgspot_img
spot_imgspot_img

ಪಂಜಾಬ್: 20 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ 4 ವರ್ಷದ ಬಾಲಕನ ರಕ್ಷಣೆ

- Advertisement -
- Advertisement -

ಪಂಜಾಬ್: ಪಂಜಾಬ್‌ನ ಚಕ್ ಸಮಾನಾ ಗ್ರಾಮದಲ್ಲಿ 20 ಅಡಿ ಆಳದ ಕೊಳವೆಬಾವಿಗೆ ಬಿದ್ದ 4 ವರ್ಷದ ಬಾಲಕನನ್ನು 9 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಿಸಲಾಗಿದೆ. ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಗುರ್ಕರನ್ ಸಿಂಗ್ ಎಂಬ ಬಾಲಕ ತನ್ನ ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಹೊಸದಾಗಿ ಕೊರೆದಿದ್ದ ಕೊಳವೆಬಾವಿಗೆ ಬಿದ್ದಿದ್ದ.

ಬಾಲಕ ಸುಮಾರು 20ರಿಂದ 30 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದ. ಮಾಹಿತಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಪಂಜಾಬ್ ಪೊಲೀಸ್, ಅಗ್ನಿಶಾಮಕ ದಳ, ಜಿಲ್ಲಾಡಳಿತ ಹಾಗೂ ಸ್ಥಳೀಯ ಸ್ವಯಂಸೇವಕರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಮಣ್ಣು ಸಡಿಲವಾಗಿ ನಿರಂತರ ಕುಸಿಯುತ್ತಿದ್ದ ಕಾರಣ ಕಾರ್ಯಾಚರಣೆ ಬಹಳ ಕಷ್ಟವಾಗಿತ್ತು. ಕೊನೆಗೂ 9 ಗಂಟೆಗಳ ಬಳಿಕ ಬಾಲಕನನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಬಾಲಕ ಆರೋಗ್ಯವಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕ ಸುರಕ್ಷಿತವಾಗಿ ಹೊರಬಂದ ತಕ್ಷಣ ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರು ಭಾವುಕರಾಗಿ ರಕ್ಷಣಾ ಸಿಬ್ಬಂದಿಯನ್ನು ಅಪ್ಪಿಕೊಂಡು ಧನ್ಯವಾದ ಸಲ್ಲಿಸಿದರು ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!