Sunday, September 13, 2026
spot_imgspot_img
spot_imgspot_img

ಜನರು ಎದುರಿಸುತ್ತಿರುವ ಅಪಾಯಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ- ಆಕ್ರಮಣಕಾರಿ ನಾಯಿಗಳಿಗೆ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

- Advertisement -
- Advertisement -

ಹೊಸದಿಲ್ಲಿ: ಮಾನವ ಜೀವಕ್ಕೆ ಅಪಾಯ ಉಂಟುಮಾಡುವ ಆಕ್ರಮಣಕಾರಿಯಾಗಿರುವ ಬೀದಿ ನಾಯಿಗಳನ್ನು ಅಗತ್ಯವಿದ್ದರೆ ದಯಾಮರಣ ನೀಡಲು ರಾಜ್ಯ ಸರಕಾರಗಳು ಹಿಂಜರಿಯಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಾರ್ವಜನಿಕ ಸಂಸ್ಥೆಗಳು ಹಾಗೂ ಜನದಟ್ಟಣೆಯ ಪ್ರದೇಶಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ 2025ರ ನವೆಂಬರ್‌ ನಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ನಿರ್ದೇಶನವನ್ನು ಮರುಪರಿಶೀಲಿಸುವಂತೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ಮಂಗಳವಾರ ಈ ಆದೇಶ ನೀಡಿದೆ.

ಆದರೆ, ಆ ತೀರ್ಪನ್ನು ಬದಲಾಯಿಸಬೇಕು ಎಂದು ಸಲ್ಲಿಕೆಯಾಗಿದ್ದ ಹಲವು ಮನವಿಗಳನ್ನು ಪೀಠ ತಿರಸ್ಕರಿಸಿದೆ.ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳು, ವೃದ್ಧರು ಹಾಗೂ ಇತರ ದುರ್ಬಲ ವರ್ಗದ ಜನರು ಎದುರಿಸುತ್ತಿರುವ ಅಪಾಯಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿತು.ನಾಗರಿಕರ ಸುರಕ್ಷತೆ ಕಾಪಾಡುವುದು ರಾಜ್ಯದ ಕರ್ತವ್ಯವಾಗಿದೆ ಎಂದು ಹೇಳಿದ ಪೀಠವು, ಸಾರ್ವಜನಿಕ ಹಿತಾಸಕ್ತಿಗೆ ಆದ್ಯತೆ ನೀಡಬೇಕೆಂದು ಸೂಚಿಸಿತು.

- Advertisement -

Related news

error: Content is protected !!