Tuesday, July 21, 2026
spot_imgspot_img
spot_imgspot_img

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

- Advertisement -
- Advertisement -

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಜರುಗಿದೆ.

ಮೈಸೂರು ನಗರದ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ ಸಂತೆಮರಳಿ ಬಳಿಯ ತಮರವಾಡಿ ಗ್ರಾಮದ ಮೊಹನ್ ಕುಮಾರ್(21) ಹಾಗೂ ಮೈಸೂರಿನ ಜಯಪುರ ಬಳಿಯ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಸಾವನಪ್ಪಿದ ಯುವಕರು.

ಈ ಇಬ್ಬರು ಐಟಿಐ ಮುಗಿಸಿ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದು, ತನ್ನ ಮತ್ತೊಬ್ಬ ಸ್ನೇಹಿತ ವಿಕಾಸ್ ಜೊತೆಗೂಡಿ ಮೂವರು ಬಲಮುರಿ ಪ್ರವಾಸಿ ತಾಣಕ್ಕೆ ಬಂದಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!