Sunday, July 19, 2026
spot_imgspot_img
spot_imgspot_img

ಜಾರ್ಖಂಡ್‌ :ಆಸ್ಪತ್ರೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ!

- Advertisement -
- Advertisement -

ರಾಂಚಿ: 14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಆಸ್ಪತ್ರೆಯ ಶೌಚಾಲಯದೊಳಗೆ ಮಗುವಿಗೆ ಜನ್ಮ ನೀಡಿದ್ದು, ಶೌಚಾಲಯದ ಪ್ಯಾನ್‌ನಲ್ಲಿ ನವಜಾತ ಶಿಶು ಸಿಲುಕಿಕೊಂಡ ಘಟನೆ ಜಾರ್ಖಂಡ್‌ ಗಿರಿದಿಹ್ವನ ಸದರ್ ಆಸ್ಪತ್ರೆಯಲ್ಲಿ ನಡೆದಿದೆ.

ಅಪ್ರಾಪ್ತ ವಯಸ್ಕ ಬಾಲಕಿಯೊಬ್ಬಳು ವಾರ್ಡ್ ಪ್ರದೇಶದ ಶೌಚಾಲಯದಿಂದ ಚಿಂತಾಜನಕ ಸ್ಥಿತಿಯಲ್ಲಿ ಹೊರಬರುತ್ತಿರುವುದನ್ನು ಕಂಡ ಅಲ್ಲಿದ್ದವರು, ಅನುಮಾನಗೊಂಡು ಆಸ್ಪತ್ರೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಬಾಲಕಿ ಆಸ್ಪತ್ರೆಯಿಂದ ಹೊರಬರಲು ಪ್ರಯತ್ನಿಸಿದ್ದು, ತಲೆತಿರುಗುವಿಕೆ ಕಾಣಿಸಿಕೊಂಡಿದ್ದರಿಂದ ಕುಸಿದು ಬಿದ್ದಿದ್ದಾಳೆ ಎನ್ನಲಾಗಿದೆ. ವಿಷಯ ತಿಳಿದ ಆಸ್ಪತ್ರೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಮತ್ತು ಆಸ್ಪತ್ರೆ ಸಿಬ್ಬಂದಿ ಶೌಚಾಲಯವನ್ನು ಪರಿಶೀಲಿಸಿದಾಗ ವಿಷಯ ತಿಳಿದು ಬಂದಿದೆ.

ಆಸ್ಪತ್ರೆಯ ವಾರ್ಡ್‌ ಶೌಚಾಲಯವನ್ನು ಪರಿಶೀಲಿಸಿದಾಗ, ನವಜಾತ ಶಿಶು ಪ್ಯಾನ್‌ನಲ್ಲಿ ಸಿಲುಕಿಕೊಂಡಿರುವುದು ಕಂಡುಬಂದಿದೆ. ಇದನ್ನು ಗಮನಿಸಿದ ವೈದ್ಯರು, ಆಸ್ಪತ್ರೆ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿ ಒಟ್ಟಾಗಿ ಮಗುವನ್ನು ಸುರಕ್ಷಿತವಾಗಿ ರಕ್ಷಿಸಲು ಮುಂದಾಗಿದ್ದಾರೆ. ಅಪ್ರಾಪ್ತ ತಾಯಿ ಮತ್ತು ನವಜಾತ ಶಿಶುವನ್ನು ಚೈತಾದಿಕ್‌ನಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಯಿತು.ವೈದ್ಯಕೀಯ ನಿಗಾದಲ್ಲಿರುವ ತಾಯಿ ಮತ್ತು ನವಜಾತ ಶಿಶುವಿನ ಸ್ಥಿತಿ ಪ್ರಸ್ತುತ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಬಾಲಕಿಯ ವಯಸ್ಸು ಮತ್ತು ಪ್ರಕರಣದ ಎಲ್ಲಾ ಅಂಶಗಳನ್ನು ಪರಿಶೀಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!