Tuesday, July 21, 2026
spot_imgspot_img
spot_imgspot_img

ಪಾಕಿಸ್ತಾನ: ಚಲಿಸುತ್ತಿದ್ದ ರೈಲಿಗೆ ಸ್ಫೋಟಕ ತುಂಬಿದ ಕಾರು ಡಿಕ್ಕಿ–24 ಮಂದಿ ಸಾವು, 50ಕ್ಕೂ ಅಧಿಕ ಮಂದಿಗೆ ಗಾಯ

- Advertisement -
- Advertisement -

ಇಸ್ಲಾಮಾಬಾದ್: ಚಲಿಸುತ್ತಿದ್ದ ರೈಲಿಗೆ ಸ್ಫೋಟಕ ತುಂಬಿದ ಕಾರು ಡಿಕ್ಕಿಯಾದ ಪರಿಣಾಮ 24 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಕ್ವೆಟ್ಟಾ ಪ್ರಾಂತ್ಯದಲ್ಲಿ ನಡೆದಿದೆ.

ಸ್ಫೋಟದ ಬಳಿಕ ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿದೆ. ಪಾಕಿಸ್ತಾನ ಮಿಲಿಟರಿ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿ ಇದಾಗಿದೆ ಎಂದು ಬಲೂಚ್ ಲಿಬರೇಶನ್ ಆರ್ಮಿ ಹೇಳಿದೆ. ಸ್ಫೋಟದ ಬಳಿಕ ಸ್ಥಳದಲ್ಲಿ ಭಾರೀ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಾಂಬ್ ಸ್ಫೋಟದ ಪರಿಣಾಮ ರೈಲ್ವೆ ಟ್ರ್ಯಾಕ್ ಬಳಿಯ ಮನೆಗಳಲ್ಲಿ ಪಾರ್ಕ್ ಮಾಡಿದ್ದ ಹತ್ತಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಅಲ್ಲದೇ ಮನೆಗಳ ಕಿಟಕಿಗಳು ಪುಡಿಯಾಗಿದೆ.

ರೈಲು ಕಂಟೋನ್ಮೆಂಟ್‌ನಿಂದ ತೆರಳುತ್ತಿದ್ದ ವೇಳೆ ಬಲೂಚಿಸ್ತಾನ ಪ್ರದೇಶದ ಕ್ವೆಟ್ಟಾದ ಚೆಮನ್ ಫಾಟಕ್ ಬಳಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದ್ದು, ಸ್ಫೋಟದ ಪರಿಣಾಮ ರೈಲಿನ ಹಲವು ಬೋಗಿಗಳು ಹಳಿತಪ್ಪಿದ್ದು, ಬೆಂಕಿ ಕಾಣಿಸಿಕೊಂಡಿದೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ರೈಲ್ವೆ, ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದ್ದು, ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!